ನವವಿವಾಹಿತೆ ಅನುಮಾನಾಸ್ಪದ ಸಾವು: ಗಂಡನ ಮನೆಯವರ ಮೇಲೆ ಕೊಲೆ ಗುಮಾನಿ - ನವವಿವಾಹಿತೆ ಸಾವು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಉಡಾ ತಾಂಡಾದಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಗಂಡನ ಮನೆಯವರು ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಮೃತಳ ಪೋಷಕರು ಆರೋಪಿಸಿದ್ದಾರೆ.
ನವವಿವಾಹಿತೆ ಅನುಮಾನಾಸ್ಪದ ಸಾವು
ದಾವಣಗೆರೆ: ಕಳೆದ ಐದು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಹಿರೇಉಡಾ ತಾಂಡಾದಲ್ಲಿ ನಡೆದಿದೆ.
ಶಿಲ್ಪಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಗಂಡನ ಮನೆಯವರು ಭಾನುವಾರ ಶಿಲ್ಪಾಳ ತವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮೃತಳ ಪೋಷಕರು, ಶಿಲ್ಪಾ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಆದರೆ, ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಶಿಲ್ಪಾಳನ್ನು ಆಕೆಯ ಗಂಡ ಹಾಗೂ ಆತನ ಕುಟುಂಬಸ್ಥರು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.