ದಾವಣಗೆರೆ:ರಾಜ್ಯದಲ್ಲಿ ಆರ್ಎಸ್ಎಸ್ ಹಾಗೂ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ. ಇವು ದೇಶಭಕ್ತ ಸಂಘಟನೆಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಆರ್ಎಸ್ಎಸ್, ಬಜರಂಗದಳ ನಿಷೇಧ ಇಲ್ಲ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ - ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ರಾಜ್ಯದಲ್ಲಿ ಆರ್ಎಸ್ಎಸ್ ಹಾಗೂ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ. ಇವು ದೇಶಭಕ್ತ ಸಂಘಟನೆಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
![ಆರ್ಎಸ್ಎಸ್, ಬಜರಂಗದಳ ನಿಷೇಧ ಇಲ್ಲ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ Basavaraj Bommai](https://etvbharatimages.akamaized.net/etvbharat/prod-images/768-512-5810450-thumbnail-3x2-net.jpg)
ನಗರದ ವಿದ್ಯಾನಗರದಲ್ಲಿ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ಮನೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರಲ್ಲ. ಜನರ ಸಂಕಷ್ಟದ ಸಂದರ್ಭಗಳಲ್ಲಿ ಕೆಲಸ ಮಾಡಿರುವ ಆರ್ಎಸ್ಎಸ್ ಹಾಗೂ ಬಜರಂಗದಳಗಳನ್ನು ನಿಷೇಧಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಇನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯರಾವ್ ಪ್ರಕರಣದ ಬಗ್ಗೆ ಈಗಾಗಲೇ ಮಂಗಳೂರು ಕಮೀಷನರ್ ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ಮಾಹಿತಿ ನೀಡಿದ್ದಾರೆ. ಆತ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ ಅವರು, ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದರು. ಇನ್ನು ಮೌಢ್ಯ ನಿಷೇಧ ಕಾಯ್ದೆ ಜಾರಿ ವಿಚಾರ ಸಂಬಂಧ ಕೆಲ ತೊಡಕುಗಳಿದ್ದವು. ಈಗ ನಿವಾರಣೆಯಾಗಿದ್ದು, ಈಗ ಎಲ್ಲಾ ದೋಷಗಳನ್ನು ಸರಿಪಡಿಸಿ ಜಾರಿ ಮಾಡಲಾಗಿದೆ ಎಂದರು.