ದಾವಣಗೆರೆ :ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿಲ್ಲ ಎನ್ನುವುದು ಮಕ್ಕಳಾಟಿಕೆಯ ಮಾತು. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಒಡಕು ನಮ್ಮಲ್ಲಿ ಇಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಒಡಕಿಲ್ಲ, ಒಟ್ಟಾಗಿದ್ದೇವೆ : ಮಾಜಿ ಡಿಸಿಎಂ ಜಿ. ಪರಮೇಶ್ವರ್ - ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ
ಪಕ್ಷ ಹೆಚ್ಚು ಸಂಘಟನೆಯಾಗುತ್ತೆ ಎಂಬ ಕಾರಣಕ್ಕೆ ಡಿ. ಕೆ. ಶಿವಕುಮಾರ್ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಈಗೇನೂ ಸಿಎಂ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ. ಬರವಣಿಗೆ ರೂಪದಲ್ಲಿ ನೀಡಿಲ್ಲ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದರು.
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಮಾತನಾಡಿದ ಅವರು, ಪಕ್ಷ ಹೆಚ್ಚು ಸಂಘಟನೆಯಾಗುತ್ತೆ ಎಂಬ ಕಾರಣಕ್ಕೆ ಡಿ ಕೆ ಶಿವಕುಮಾರ್ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಸದ್ಯ ಮೌಖಿಕವಾಗಿ ಒಪ್ಪಿಗೆ ನೀಡಿದ್ದಾರೆ. ಬರವಣಿಗೆ ರೂಪದಲ್ಲಿ ನೀಡಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಎಂಎಲ್ಸಿ ಆಗಲು ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಕೇವಲ ಇಬ್ಬರಿಗೆ ಮಾತ್ರ ಅವಕಾಶ ಸಿಗುತ್ತದೆ. ಮುಖಂಡರ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದ ಅವರು, ಬಿಜೆಪಿ ಪಕ್ಷದಿಂದ ನಾವೇನು ಪಾಠ ಕಲಿಯಬೇಕಿಲ್ಲ. ಈ ಹಿಂದೆ ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ರಾಜ್ಯಸಭಾ ಟಿಕೆಟ್ ನೀಡಿತ್ತು. ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯ ಅನುಭವ ಬೇಕು ಎಂಬ ಕಾರಣಕ್ಕೆ ರಾಜ್ಯಸಭೆಗೆ ಕಳುಹಿಸಿಕೊಡಲಾಗಿದೆ ಎಂದರು.