ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ‌ ಲಾಕ್​ಡೌನ್ ಇಲ್ಲ: ಡಿಸಿ ಸ್ಪಷ್ಟನೆ - Lockdown news

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೇರೆ ಬೇರೆ ಜಿಲ್ಲೆಗಳ ಕೊರೊನಾ ರೋಗಿಗಳನ್ನು ಇಲ್ಲಿಗೆ ಕರೆ ತರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಆದ್ರೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಮಾಡುವ ಪ್ರಸ್ತಾಪ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.

District Collector Mahantesh R. Bilagi
ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ

By

Published : Jul 20, 2020, 4:22 PM IST

Updated : Jul 20, 2020, 5:14 PM IST

ದಾವಣಗೆರೆ: ಜಿಲ್ಲೆಯನ್ನು ಸಂಪೂರ್ಣ ಲಾಕ್‌ಡೌನ್ ಮಾಡುವ ಪ್ರಸ್ತಾಪ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೇರೆ ಬೇರೆ ಜಿಲ್ಲೆಗಳ ಕೊರೊನಾ ರೋಗಿಗಳನ್ನು ಇಲ್ಲಿಗೆ ಕರೆ ತರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ತಾಲೂಕು, ಹಳ್ಳಿಮಟ್ಟದಲ್ಲಿ ಲಾಕ್​ಡೌನ್ ಮಾಡಿಕೊಳ್ಳಲಿ. ಆದ್ರೆ ಜಿಲ್ಲಾಡಳಿತ ಈ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಜೊತೆ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಲಾಗಿದೆ. ಕೊರೊನಾ ಸೋಂಕಿತರ ಮೂಲ ಪತ್ತೆ ಹಚ್ಚುವ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ 225 ಕಂಟೈನ್​ಮೆಂಟ್​ ಝೋನ್​ಗಳಿದ್ದು, ಸರ್ವೇಲೆನ್ಸ್ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಶೇ. 50ರಷ್ಟು ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಎಷ್ಟು ಪಾಸಿಟಿವ್ ಬಂದರೂ ಬೆಡ್ ವ್ಯವಸ್ಥೆಯಲ್ಲಿ ಸಮಸ್ಯೆಯಾಗುವುದಿಲ್ಲ ಎಂದು ಮಾಹಿತಿ ನೀಡಿದರು.

Last Updated : Jul 20, 2020, 5:14 PM IST

ABOUT THE AUTHOR

...view details