ದಾವಣಗೆರೆ:ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬೆಂಬಲಿಗರಿಂದ ರಾಜ್ಯಾದ್ಯಂತ ಪ್ರತಿಭಟನೆಯ ಆಕ್ರೋಶ ವ್ಯಕ್ತವಾಗುತ್ತಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಡಿಕೆಶಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಬಂಧನ: ಚನ್ನಗಿರಿಯಲ್ಲೂ ಭುಗಿಲೆದ್ದ ಆಕ್ರೋಶ, ಪ್ರೊಟೆಸ್ಟ್ - Channagiri town
ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬೆಂಬಲಿಗರಿಂದ ರಾಜ್ಯಾದ್ಯಂತ ಪ್ರತಿಭಟನೆಯ ಆಕ್ರೋಶ ವ್ಯಕ್ತವಾಗುತ್ತಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಡಿಕೆಶಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಬಂಧನ: ಚನ್ನಗಿರಿಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರಿಂದ ಪ್ರತಿಭಟನೆ
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಟೈರ್ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿ.ಕೆ.ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ , ಡಿಕೆಶಿಗೆ ಜೈಕಾರ ಕೂಗುತ್ತ ಬೆಂಬಲ ವ್ಯಕ್ತ ಪಡಿಸಿದರು.
ಎನ್‌ಎಸ್‌ಯುಐ ಕಾರ್ಯಕರ್ತರಿಗೆ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.