ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ರಂಜಾನ್ ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ ಹಾಗೂ ಮೆರವಣಿಗೆಗೆ ಅನುಮತಿ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.
ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ವಕ್ಫ್ ಬೋರ್ಡ್‌ನಿಂದ ನಿಯಮಾವಳಿ ಜಾರಿಗೊಳಿಸಲಾಗಿದೆ. ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಈ ಬಗ್ಗೆ ಅವರಿಗೆ ತಿಳಿವಳಿಕೆ ನೀಡಿದ್ದೇವೆ. ರಂಜಾನ್ ಆಚರಣೆ ದಿನವನ್ನು ಮುಸ್ಲಿಂ ಮುಖಂಡರೇ ನಿರ್ಧರಿಸಲಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.