ಕರ್ನಾಟಕ

karnataka

By

Published : Mar 26, 2020, 10:52 PM IST

ETV Bharat / state

ದಾವಣಗೆರೆಯ ಮಹಿಳೆಗೆ ಕೊರೊನಾ ಸೋಂಕು ದೃಢ: ಡಿಸಿ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.

davangere
ದಾವಣಗೆರೆಯ ಮಹಿಳೆಗೆ ಕೊರೊನಾ ಸೋಂಕು ದೃಢ: ಡಿಸಿ ಸ್ಪಷ್ಟನೆ

ದಾವಣಗೆರೆ: ಜಿಲ್ಲೆಯ ಮಹಿಳೆಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸ್ಪಷ್ಟನೆ ನೀಡಿದ್ದಾರೆ.

ಮಹಿಳೆ ಚಿತ್ರದುರ್ಗ ಮೂಲದವಳಾಗಿದ್ದು, ಅವರನ್ನು ಚಿಕಿತ್ಸೆಗೆಂದು ಜಿಲ್ಲೆಗೆ ಕರೆತರಲಾಗಿದೆ. ಈ ಹಿನ್ನಲೆಯಲ್ಲಿ ದಾವಣಗೆರೆಯ ಪ್ರಕರಣ ಎಂದು ನಮೂದಿಸಲಾಗಿದೆ ಎಂಬ ಮಾಹಿತಿಯಿದೆ.

ದಾವಣಗೆರೆಯ ಮಹಿಳೆಗೆ ಕೊರೊನಾ ಸೋಂಕು ದೃಢ: ಡಿಸಿ ಸ್ಪಷ್ಟನೆ

ಮಾರ್ಚ್ 4ರಿಂದ ಇದುವರೆಗೆ 329 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದಾರೆ. ಅದರಲ್ಲಿ ಓರ್ವ ವ್ಯಕ್ತಿ 28 ದಿನಗಳ ಕಾಲ ಕ್ವಾರಂಟೈನ್ ಹಾಗು 81 ಜನರು 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಇನ್ನುಳಿದ 244 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಿದ್ದು, 25 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಇದುವರೆಗೆ 20 ಜನರು ಸೂಕ್ತ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಸಾರ್ವಜನಿಕರಲ್ಲಿ ಮನವಿ:

ಕೋವಿಡ್-19 ಪೀಡಿತ ಪ್ರದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ್ದರೆ, ಅವರು 14 ದಿನಗಳವರೆಗೆ ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳಬೇಕು. ಅಥವಾ 104 ಸಹಾಯವಾಣಿಗೆ ಕರೆ ಮಾಡುವುದು, ವೈಯುಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ ಟಿಶ್ಯೂ ಪೇಪರನ್ನು ಬಳಸಬೇಕು. ಅಲ್ಲದೆ, ಸ್ಯಾನಿಟೈಜರ್​ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ್ಗೆ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು ಮಹಾಂತೇಶ್ ಬೀಳಗಿಯವರು ಜನತೆಗೆ ಮನವಿ ಮಾಡಿದ್ದಾರೆ.

ABOUT THE AUTHOR

...view details