ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಗೈರು ಹಾಜರಾದ ಕಾಂಗ್ರೆಸ್ನ ಪಾಲಿಕೆ ಸದಸ್ಯೆ ಯಶೋಧ ಉಮೇಶ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ದಾವಣಗೆರೆ ಪಾಲಿಕೆ ಮೇಯರ್ ಚುನಾವಣೆಗೆ ಗೈರು: ಕೈ ಸದಸ್ಯೆ ವಿರುದ್ಧ ಕಾರ್ಯಕರ್ತರ ಆಕ್ರೋಶ - ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ
ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಗೈರು ಹಾಜರಾದ ಕಾಂಗ್ರೆಸ್ನ ಪಾಲಿಕೆ ಸದಸ್ಯೆ ಯಶೋಧ ಉಮೇಶ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಕಾಂಗ್ರೆಸ್ ನ ಪಾಲಿಕೆ ಸದಸ್ಯೆ ಯಶೋಧಾ ಉಮೇಶ್
ಯಶೋಧ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಾರ್ಡ್ನಲ್ಲಿ ಅವರ ವಿರುದ್ಧ ಫ್ಲೆಕ್ಸ್ ಹಾಕಿಸಲಾಗಿದೆ. ಇದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಬರಹ ಇದೆ. ನಗರದ ಭಾರತ್ ಕಾಲೋನಿಯಲ್ಲಿ ಯಶೋಧ ಮನೆ ಇದ್ದು, ಈಗ ಪರಿಸ್ಥಿತಿ ಶಾಂತವಾಗಿದೆ.
ಪಾಲಿಕೆ ಮೇಯರ್ ಚುನಾವಣೆ ವೇಳೆ ಗೈರು ಹಾಜರಾಗಿ ಬಿಜೆಪಿ ಗೆಲುವಿಗೆ ಯಶೋಧ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.