ಕರ್ನಾಟಕ

karnataka

ETV Bharat / state

ಶಾಸಕಿ ಪೂರ್ಣಿಮಾಗೆ ಸಚಿವ ಸ್ಥಾನ ನೀಡಬೇಕು:ಯಾದವ ಸಮಾಜದಿಂದ ಬೇಡಿಕೆ - ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆ

ಮುಂದಿನ ಸಂಪುಟ ವಿಸ್ತರಣೆ ವೇಳೆ ಪೂರ್ಣಿಮ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕು ಎಂಬ ಬೇಡಿಕೆಯನ್ನು ಯಾದವ ಸಮಾಜ ಬಿಜೆಪಿ ಮುಂದಿಟ್ಟಿದೆ.

ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಮಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

By

Published : Sep 1, 2019, 3:48 AM IST

ದಾವಣಗೆರೆ: ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆಯಾದ ಬಳಿಕ ಸಚಿವ ಸ್ಥಾನ ಆಕಾಂಕ್ಷಿಗಳು ನಿರಾಸೆಗೊಂಡಿದ್ದರು. ಅದರಲ್ಲಿ ಮುಖ್ಯವಾಗಿ ಯಾದವ ಸಮಾಜದ ಏಕೈಕ ಶಾಸಕಿ ಪೂರ್ಣಿಮ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂಬ ಒತ್ತಡ ಕೇಳಿ ಬಂದಿತ್ತು. ಆದರೆ, ಕಾರಣಾಂತರಗಳಿಂದ ಸಚಿವ ಸ್ಥಾನ ಕೊನೆಗಳಿಗೆಯಲ್ಲಿ ಕೈತಪ್ಪಿತ್ತು.

ಈ ಹಿನ್ನೆಲೆ ಮುಂದಿನ ಸಂಪುಟ ವಿಸ್ತರಣೆ ವೇಳೆ ಪೂರ್ಣಿಮ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂಬ ಬೇಡಿಕೆಯನ್ನು ಯಾದವ ಸಮಾಜ ಬಿಜೆಪಿ ಮುಂದಿಟ್ಟಿದೆ.

ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಮಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ರಚನೆಯಾದ ಬಳಿಕ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ಕಾದಿತ್ತು. ಸೋತವರಿಗೂ ಮಣೆ ಹಾಕಿ ಸಚಿವ ಸ್ಥಾನ ನೀಡಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ದಾವಣಗೆರೆಯಲ್ಲಿ ಯಾದವ ಮಹಾಸಭಾ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿತ್ತು. ಇದೇ ಬೇಡಿಕೆಯನ್ನು ಮತ್ತೆ ಮುಂದಿಟ್ಟುಕೊಂಡು ಯಾದವ ಸಮಾಜ ಪೂರ್ಣಿಮ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹ ಮಾಡಿದೆ.

ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ ಕೃಷ್ಣ ಜನ್ಮಾಷ್ಮಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೂರ್ಣಿಮ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಪ್ರತಿಧ್ವನಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಹಿರಿಯ ಮುಖಂಡ ಬಾಡದ ಆನಂದರಾಜ್, ನಮ್ಮ ಯಾದವ ಸಮಾಜದ ಏಕೈಕ ಶಾಸಕಿ ಪೂರ್ಣಿಮ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ ಅವರ ಬಳಿ ಕೇಳಿಕೊಂಡಿದ್ದೆವು. ಅವರು ತುಂಬಾ ಪ್ರಯತ್ನ ಮಾಡಿದ್ದರು ಸಹ ರಾಜಕೀಯ ಜಂಜಾಟದಲ್ಲಿ ವಂಚಿತರಾಗಬೇಕಾಗಿ ಬಂತು, ಹೀಗಾಗಿ ಮುಂದಿನ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುವಂತೆ ಮಾಡಿ ಹಾಗೂ ನಮ್ಮ ಸಮಾಜ ಹಿಂದುಳಿದ ಜನಾಂಗವಾಗಿದ್ದು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದುವರೆಯಲು ಗೊಲ್ಲ ಅಭಿವೃದ್ದಿ ಪ್ರಾಧಿಕಾರ ರಚಿಸಿ ಪೂರ್ಣಿಮ ಶ್ರೀನಿವಾಸ್ ರವರನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ಒತ್ತಾಯಿಸಿದರು.

ABOUT THE AUTHOR

...view details