ಕರ್ನಾಟಕ

karnataka

ETV Bharat / state

ತುಂಬಿ ಹರಿಯುತ್ತಿರುವ ಸೂಳೆಕೆರೆ ಹಳ್ಳ: ವಾಹನ ಸವಾರರ ಪರದಾಟ - ಸೂಳೆಕೆರೆ ಹಳ್ಳ ಲೇಟೆಸ್ಟ್ ನ್ಯೂಸ್

ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದ ಸೇತುವೆ ಬಳಿಯಿರುವ ಸೂಳೆಕೆರೆ ಹಳ್ಳ ತುಂಬಿ ಹರಿಯುತ್ತಿದೆ. ಪರಿಣಾಮ ಶಾಲಾ ವಾಹನ ಸೇರಿದಂತೆ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ.

Overflowing of sulekere brooklet due to rain
ವಾಹನ ಸವಾರರ ಪರದಾಟ

By

Published : Oct 16, 2021, 3:42 PM IST

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದ ಸೇತುವೆ ಬಳಿ ಇರುವ ಸೂಳೆಕೆರೆ ಹಳ್ಳ ಮಳೆಯಿಂದ ತುಂಬಿ ಹರಿಯುತ್ತಿದ್ದು, ಶಾಲಾ ಮಕ್ಕಳ ವಾಹನ ಸೇರಿದಂತೆ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ.

ರಸ್ತೆ ದಾಟಲು ಪರದಾಡುತ್ತಿರುವ ವಾಹನ ಸವಾರರು

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇದರಿಂದ ಕೆಲ ಭಾಗಗಳಲ್ಲಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅದರಂತೆ ಕೆಂಗಾಪುರ ಗ್ರಾಮದಲ್ಲಿನ ಸೂಳೆಕೆರೆ ಹಳ್ಳ ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಅಷ್ಟೇ ಅಲ್ಲದೆ ಶಾಲೆಗಳಿಗೆ ತೆರಳುವ ವಾಹನಗಳು ಇದೇ ಮಾರ್ಗವಾಗಿ ಸಂಚರಿಸಬೇಕು. ರಸ್ತೆಯಲ್ಲಿ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ತುಂಬಿ ಹೋಗಿದೆ. ಇದರಿಂದ ಶಾಲಾ ವಾಹನ ಚಾಲಕರು ಪರದಾಡುತ್ತಿದ್ದಾರೆ.

ಈ ಭಾಗದಲ್ಲಿ ಎತ್ತರವಾದ ಸೇತುವೆ ನಿರ್ಮಾಣ ಮಾಡುವಂತೆ ಕೆಂಗಾಪುರದ ಗ್ರಾಮಸ್ಥರು ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಅಧಿಕಾರಿಗಳು ಸೇತುವೆ ನಿರ್ಮಾಣ ಮಾಡಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

ಇದನ್ನೂ ಓದಿ: ವಾಯುಭಾರ ಕುಸಿತ: ಇಂದು, ನಾಳೆ ಕರ್ನಾಟಕದ 16 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ABOUT THE AUTHOR

...view details