ಕರ್ನಾಟಕ

karnataka

ETV Bharat / state

ಗ್ರಾಪಂ ಅಧ್ಯಕ್ಷ ರಾಜೀನಾಮೆ ನೀಡೋಕೂ ಹಿಂದೇಟು ಹಾಕುವಾಗ ನಾನು ಸಿಎಂ ಸ್ಥಾನ ಬಿಟ್ಬಂದೆ : ಬಿಎಸ್​​ವೈ - ತಮ್ಮ ತ್ಯಾಗದ ಬಗ್ಗೆ ಯಡಯೂರಪ್ಪ ಮಾತು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಅಭ್ಯರ್ಥಿ ಪರವಾಗಿ ದಾವಣಗೆರೆಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು..

B.S.Yadiyurappa
ಬಿ.ಎಸ್.ಯಡಿಯೂರಪ್ಪ

By

Published : Nov 29, 2021, 8:45 PM IST

ದಾವಣಗೆರೆ :ಗ್ರಾಪಂ ಅಧ್ಯಕ್ಷರು ರಾಜೀನಾಮೆ ನೀಡಲು ಹಿಂದೆ-ಮುಂದೆ ನೋಡುತ್ತಾರೆ. ಆದರೆ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಾಯಿಯವರನ್ನು ಸಿಎಂ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ..

ನಗರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡಿದ್ದೇನೆಂದು ನಾನು ಮನೆಯಲ್ಲಿ ಕುಳಿತುಕೊಂಡಿಲ್ಲ.

ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಪಡೆಯುವ ಮೂಲಕ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿರೀಕ್ಷೆ ಹೊಂದಿದ್ದೇವೆ ಎಂದರು.

ಜನ ತಿರಸ್ಕಾರ ಮಾಡಿದ ಕಾಂಗ್ರೆಸ್ ಅನ್ನು ಹೇಳಲು ಹೆಸರಿಲ್ಲದಂತೆ ಮಾಡಬೇಕು. ಕಾಂಗ್ರೆಸ್​​​ನವರು ಹಣ ಬಲ, ತೋಳ್ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಗೆಲ್ಲುತ್ತಾ ಬಂದಿದ್ದಾರೆ. ಆದರೀಗ ಕಾಂಗ್ರೆಸ್ ಹೇಳೋಕೆ ಹೆಸರಿಲ್ಲದಂತಾಗಿದೆ.

ಕೇಂದ್ರದಲ್ಲಿ ಕೂಡ ಮೋದಿ‌ ನೇತೃತ್ವದಲ್ಲಿ ಬಿಜೆಪಿ ಮುಂದುವರೆಯುತ್ತದೆ. ಗ್ರಾಮ ಪಂಚಾಯತ್‌ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ತಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿಂದು 257 ಮಂದಿಗೆ ಸೋಂಕು ದೃಢ ; ಐವರು ಬಲಿ

ABOUT THE AUTHOR

...view details