ದಾವಣಗೆರೆ :ಕೊರೊನಾ ಆರ್ಭಟದ ನಡುವೆಯೂ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಯಶಸ್ವಿಯಾಗಿ ಮುಗಿದಿದೆ. ಇಂದು ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ವೇಳೆ ಜನರು ಕೋವಿಡ್ ನಿಯಮ ಗಾಳಿಗೆ ತೂರಿ ಗುಂಪುಗೂಡಿದ್ದಾರೆ.
ಕೋವಿಡ್ ನಿಯಮ ಗಾಳಿಗೆ ತೂರಿ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು! - people break covid-19 rules in davanagere
ಮತ ಎಣಿಕೆ ವೇಳೆ ಕೋವಿಡ್ ನಿಯಮ ಪಾಲಿಸಬೇಕೆಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಜನರು ಮಾತ್ರ ಕ್ಯಾರೆ ಎನ್ನುತ್ತಿಲ್ಲ..
ಕೋವಿಡ್ ನಿಯಮ ಗಾಳಿಗೆ ತೂರಿ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ ಜನರು!
ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಈ ನಡುವೆ ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗೂಡಿದ್ದಾರೆ.
ಮತ ಎಣಿಕೆ ವೇಳೆ ಕೋವಿಡ್ ನಿಯಮ ಪಾಲಿಸಬೇಕೆಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಜನರು ಮಾತ್ರ ಕ್ಯಾರೆ ಎನ್ನುತ್ತಿಲ್ಲ.