ಕರ್ನಾಟಕ

karnataka

ETV Bharat / state

ತೊಟ್ಟಿಲು ಕಾರ್ಯಕ್ರಮದಲ್ಲಿ ಊಟ ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥ.. - ಶಾಸಕ ಎಂ ಪಿ ರೇಣುಕಾಚಾರ್ಯ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದ ತೊಟ್ಟಿಲು ಕಾರ್ಯಕ್ರಮದಲ್ಲಿ ಊಟ ಸೇವಿಸಿ 60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಂ ಪಿ ರೇಣುಕಾಚಾರ್ಯ
ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎಂ ಪಿ ರೇಣುಕಾಚಾರ್ಯ

By

Published : Nov 7, 2022, 8:49 PM IST

ದಾವಣಗೆರೆ:ತೊಟ್ಟಿಲು ಕಾರ್ಯಕ್ರಮದಲ್ಲಿ ಊಟ ಸೇವಿಸಿ 60 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ. ಊಟ ಸೇವಿಸಿ ಅಸ್ವಸ್ಥಗೊಂಡವರನ್ನು ನ್ಯಾಮತಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ‌

ಇನ್ನು ಘಟನೆ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಶಾಸಕ ಎಂ ಪಿ ರೇಣುಕಾಚಾರ್ಯ ಧೈರ್ಯ ತುಂಬಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

ಶಾಸಕ ಎಂ ಪಿ ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿದರು

ತಮ್ಮನ ಮಗನ ಸಾವಿನ ದುಃಖದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ ತನಗೆ ಕುಟುಂಬಕ್ಕಿಂತ ಕ್ಷೇತ್ರದ ಜನ ಮುಖ್ಯ ಎಂದು ಮತ್ತೊಮ್ಮೆ ಸಂದೇಶ ರವಾನಿಸಿದರು. ಇನ್ನು 60 ಜನರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಶಾಸಕ ಎಂ ಪಿ ರೇಣುಕಾಚಾರ್ಯ ವೈದ್ಯರಿಗೆ ಆದೇಶಿಸಿದರು. ಇನ್ನು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಓದಿ:ಕಲಬುರಗಿ: ಕಲುಷಿತ ನೀರು ಕುಡಿದು ಪೆಂಚನಹಳ್ಳಿ ಗ್ರಾಮಸ್ಥರು ಅಸ್ವಸ್ಥ

ABOUT THE AUTHOR

...view details