ಕರ್ನಾಟಕ

karnataka

ETV Bharat / state

ಕೊರೊನಾ ವ್ಯಾಕ್ಸಿನ್ ಕಂಡುಹಿಡಿಯುವವರೆಗೆ ಸಹಕರಿಸಿ.. ಸಚಿವ ಶ್ರೀರಾಮುಲು ಮನವಿ - invent corona vaccine

ಲಾಕ್‌ಡೌನ್‌ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್‌ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಮತ್ತೊಮ್ಮೆ ಲಾಕ್‌ಡೌನ್ ಸಾಧ್ಯವಿಲ್ಲ. ಜನರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು.

invent corona vaccine
ಸಚಿವ ಶ್ರೀರಾಮುಲು

By

Published : Jun 15, 2020, 3:24 PM IST

ದಾವಣಗೆರೆ :ಜುಲೈ ಹಾಗೂ ಅಗಸ್ಟ್​ನಲ್ಲಿ ಕೊರೊನಾ ಪ್ರಕರಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಮಹಾಮಾರಿಗೆ ವ್ಯಾಕ್ಸಿನ್ ಕಂಡು ಹಿಡಿಯುವವರೆಗೆ ಜನರು ಸಹಕರಿಸಬೇಕು. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ‌ ಲಕ್ಷ್ಮಿಪುರ ಗ್ರಾಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೊನಾ ನಿಯಂತ್ರಣಕ್ಕೆ ಶ್ರಮ ವಹಿಸಲಾಗುತ್ತಿದೆ. ಬೆಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಆತಂಕಪಡುವ ಅಗತ್ಯ ಇಲ್ಲ ಎಂದರು.

ಕೊರೊನಾ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯೆ..

ಲಾಕ್‌ಡೌನ್‌ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್‌ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಮತ್ತೊಮ್ಮೆ ಲಾಕ್‌ಡೌನ್ ಸಾಧ್ಯವಿಲ್ಲ. ಜನರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದರು.

ಸಿಎಂ ಯಡಿಯೂರಪ್ಪ ಕೊರೊನಾ ನಿಯಂತ್ರಣ ಸಂಬಂಧ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು, ಮಂತ್ರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ಆಡಳಿತ ಪಕ್ಷದವರು ಗಮನ ಹರಿಸಬೇಕು. ಮುಜುಗರವಾಗುವಂತಹ ಹೇಳಿಕೆ ನೀಡಬಾರದು ಎಂದು ಮನವಿ ಮಾಡಿದರು.

ABOUT THE AUTHOR

...view details