ದಾವಣಗೆರೆ:ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರನ್ನು ಅನಾರೋಗ್ಯ ಹಿನ್ನೆಲೆ ಹರಿಹರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲೆಯ ಹರಿಹರದಲ್ಲಿ ನಡೆದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ಕುಸಿದು ಬಿದ್ದಿದ್ದರು.
ಹರಿಹರದಲ್ಲಿ "ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಗಳು" ವಿಚಾರ ಸಂಕೀರ್ಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಭಾಷಣ ಮಾಡುವಾಗ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಕನ್ನಡ ವಿದ್ಯಾರ್ಥಿಗಳು ಮುಖ್ಯ ಲೇಖಕರ ಪಠ್ಯ ಅಭ್ಯಾಸ ಮಾಡದ ಸ್ಥಿತಿ ಉಂಟಾಗಿದೆ : ಬರಗೂರು ರಾಮಚಂದ್ರಪ್ಪ
ನಾನು ಹುಷಾರಾಗಿದ್ದೇನೆ..: ಸ್ವಲ್ಪ ತಲೆಸುತ್ತು ಬಂದಿತ್ತು ಅಷ್ಟೇ, ನಾನು ಹುಷಾರಾಗಿದ್ದೇನೆ. ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದೇನೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಹರಿಹರದಲ್ಲಿ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೆ. ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಕಾರ್ಯಕ್ರಮ ನಂತರ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೆ. ಎಸ್ಸಿ ಹಾಗೂ ಎಸ್ಟಿ ಸ್ಪರ್ಧಾ ಪರೀಕ್ಷೆಗೆ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದಾಗ ತಲೆ ಸುತ್ತು ಬಂದ ಅನುಭವ ಆಯಿತು. ತಕ್ಷಣ ಕಾರಲ್ಲಿ ಕುಳಿತುಕೊಂಡೆ, ನಂತರ ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು' ಎಂದರು.