ಕರ್ನಾಟಕ

karnataka

ETV Bharat / state

ಮಾಸ್ಕ್ ಧರಿಸದ ಪೊಲೀಸ್ ಕಾನ್ಸ್​​ಟೇಬಲ್​​: ದಂಡ ವಿಧಿಸಿದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಸ್ಕ್ ಧರಿಸದ ಪೊಲೀಸ್ ಕಾನ್ಸ್​ಟೇಬಲ್​ಗೆ ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ದಂಡ ವಿಧಿಸಿದರು.

Davangere
ಕಾನ್​ಸ್ಟೇಬಲ್​ಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ

By

Published : Jun 18, 2020, 3:31 PM IST

ದಾವಣಗೆರೆ: ಮಾಸ್ಕ್ ಧರಿಸದ ಪೊಲೀಸ್ ಕಾನ್ಸ್​​ಟೇಬಲ್​ಗೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ದಂಡ ವಿಧಿಸಿದ ಘಟನೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದಿದೆ.

ಮಾಸ್ಕ್ ಧರಿಸದ ಕಾನ್ಸ್​​ಟೇಬಲ್​ಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ

ಪಾಲಿಕೆ ಮುಂಭಾಗ ಮಾಸ್ಕ್ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್​. ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಪಾಲಿಕೆಯ ಮೇಯರ್ ಅಜಯ್ ಕುಮಾರ್ ಚಾಲನೆ ನೀಡಿದರು. ಬಳಿಕ ವಾಹನ ಸವಾರರು ಮತ್ತು ಜನರಿಗೆ ಡಿಸಿಯವರೇ ಸ್ವತಃ ಮಾಸ್ಕ್ ವಿತರಿಸಿ ಎಲ್ಲರೂ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಿದರು.

ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್‌ ಮಾಸ್ಕ್ ಧರಿಸದ ಕಾರಣ 200 ರೂಪಾಯಿ ದಂಡ ವಿಧಿಸಿದರು. ಈ ವೇಳೆ ಸ್ಥಳದಲ್ಲಿದ್ದ ಎಸ್ಪಿ ಹನುಮಂತರಾಯ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದರು.

ಈ ವೇಳೆ ಮಾತನಾಡಿದ ಮಹಾಂತೇಶ್ ಆರ್. ಬೀಳಗಿ, ಪ್ರತಿಯೊಬ್ಬರೂ ಮನೆಯಿಂದ ಹೊರ ಬರುವಾಗ ಮಾಸ್ಕ್​ ಧರಿಸುವ ಮೂಲಕ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಬೇಕು.‌ ಇಲ್ಲದಿದ್ದರೆ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details