ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ ಪೋಷಣ್ ಮಾಸಾಚರಣೆ

ದಾವಣಗೆರೆ ಜಿಲ್ಲೆಯಲ್ಲಿ 2019ರಲ್ಲಿ ಶೇ. 10.91 ಅಪೌಷ್ಟಿಕತೆ ಇತ್ತು. ಈ ಬಾರಿ ಶೇ. 8.59ರಷ್ಟು ಆಗುವ ಮೂಲಕ ಜಿಲ್ಲೆಯಲ್ಲಿ ಶೇ. 2.30ರಷ್ಟು ಅಪೌಷ್ಟಿಕತೆ ಕಡಿಮೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್ ಹೇಳಿದ್ದಾರೆ.

dsdd
ದಾವಣಗೆರೆಯಲ್ಲಿ ಪೋಷಣ್ ಮಾಸಾಚರಣೆ

By

Published : Sep 9, 2020, 9:32 AM IST

ದಾವಣಗೆರೆ: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜನರನ್ನು ಒಗ್ಗೂಡಿಸಿ ಕಾರ್ಯಕ್ರಮ ಮಾಡುವುದು ಕಷ್ಟ ಸಾಧ್ಯವಾಗಿದೆ. ಈ ಹಿನ್ನೆಲೆ ವಾಟ್ಸಪ್, ಟಿವಿ ಮೂಲಕ ಸಂದೇಶ ಹಾಗೂ ಭಿತ್ತಿ ಪತ್ರ, ಕರಪತ್ರ ನೀಡುವ ಮೂಲಕ ಕಾರ್ಯಕ್ರಮದ ಕುರಿತು ಜನರಿಗೆ ಪ್ರಚಾರದೊಂದಿಗೆ ಅರಿವು ಮೂಡಿಸಲಾಗುವುದು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕು ಮಟ್ಟದಲ್ಲಿ 428 ಅಂಗನವಾಡಿ ಕೇಂದ್ರಗಳ ಕಟ್ಟಡ ಮತ್ತು ಕಾಂಪೌಂಡ್‍ಗಳನ್ನು ಗುರುತಿಸಲಾಗಿದೆ. ಪೋಷಣ್ ಮಾಸಾಚರಣೆಯಲ್ಲಿ ಅಂಗನವಾಡಿ ಆವರಣದಲ್ಲಿ ಕೈತೋಟ ನಿರ್ಮಿಸಲು 1000 ರೂಪಾಯಿ ಅನುದಾನ ನೀಡಲಾಗುವುದು. ಇದರಲ್ಲಿ ಅಗತ್ಯವಾದ ಸಸಿ, ಬೀಜಗಳು ಹಾಗೂ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ ಎಂದರು.

ABOUT THE AUTHOR

...view details