ಕರ್ನಾಟಕ

karnataka

ETV Bharat / state

ದಾವಣಗೆರೆ: ಸರಳವಾಗಿ ಗಾಂಧಿ, ಲಾಲ್‌ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲು ನಿರ್ಧಾರ - gandhiji and lal bahadur shastri jayanti celebration

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಕುರಿತಂತೆ ದಾವಣಗೆರೆ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

Meeting
Meeting

By

Published : Sep 26, 2020, 4:21 PM IST

ದಾವಣಗೆರೆ: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಅಕ್ಟೋಬರ್ 2 ರಂದು ಆಚರಿಸಲಾಗುವುದು ಅಂತ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಕುರಿತಂತೆ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.

ಇನ್ನು ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಜೀವನ ಸಾಧನೆ ಕುರಿತಂತೆ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಮತ್ತು ಗಾಂಧೀಜಿಯವರಿಗೆ ಪ್ರಿಯವಾಗಿದ್ದ ರಘುಪತಿ ರಾಜಾರಾಂ, ವೈಷ್ಣವಜನತೋ ಸೇರಿದಂತೆ ಇತರೆ ಹಾಡುಗಳ ಗೀತಾ ಗಾಯನ ಪ್ರಸ್ತುತಪಡಿಸಲಾಗುವುದು ಎಂದು ಹೇಳಿದರು.

ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ವ್ಯವಸ್ಥೆ ಇರುತ್ತದೆ. ಅಲ್ಲದೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಬಳಸಿ ಪರೀಕ್ಷೆ ಮಾಡಿ ಪ್ರವೇಶ ನೀಡುವ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ABOUT THE AUTHOR

...view details