ದಾವಣಗೆರೆ: ವಿರೋಧ ಪಕ್ಷದ ನಾಯಕರಾಗಿ ಹೆಚ್.ಕೆ.ಪಾಟೀಲರನ್ನು ನೇಮಕ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.
ವಿರೋಧ ಪಕ್ಷದ ನಾಯಕರನ್ನಾಗಿ ಎಚ್.ಕೆ. ಪಾಟೀಲ್ ನೇಮಿಸಲು ಒತ್ತಾಯ
ಮೂಲ ಕಾಂಗ್ರೆಸ್ಸಿಗರಾದ ಹೆಚ್.ಕೆ.ಪಾಟೀಲ ಅವರನ್ನು ವಿಪಕ್ಷ ನಾಯಕರಾಗಿ ನೇಮಕ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ. ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.
ದಾವಣಗೆರೆ ಮಾಜಿ ಅಧ್ಯಕ್ಷ ಎ.ಗೋವಿಂದ ರೆಡ್ಡಿ
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಕೆಪಿಸಿಸಿಯ ಹಿರಿಯ ಸದಸ್ಯರು ಹಾಗೂ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ವಿರೋಧ ಪಕ್ಷದ ನಾಯಕರಾಗಲು ಸಮರ್ಥರಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೂ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಮಚಂದ್ರ, ವೆಂಕಪ್ಪ ರೆಡ್ಡಿ, ಅರ್ಜುನ್ ಸಾ ಪವರ್, ಆನಂದರೆಡ್ಡಿ, ರವಿಕುಮಾರ್, ಹರೀಶ್, ಸಲ್ಮಾನ್ ಖಾನ್ ಇದ್ದರು.