ಕರ್ನಾಟಕ

karnataka

ETV Bharat / state

ಖಾಸಗಿ ಬಸ್ ಪಲ್ಟಿ: 9ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ - ಈಟಿವಿ ಭಾರತ ಕನ್ನಡ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

private-bus-accident-at-davanagere
ಖಾಸಗಿ ಬಸ್ ಪಲ್ಟಿ :9ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

By

Published : Aug 10, 2022, 11:23 AM IST

ದಾವಣಗೆರೆ: ಬೆಂಗಳೂರು ಕಡೆಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಒಂಬತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಡರಾತ್ರಿ 1:30ಕ್ಕೆ ಈ ಭೀಕರ ಅಪಘಾತ‌ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೀಡಾದ ಖಾಸಗಿ ಬಸ್ ನಲ್ಲಿ ಸುಮಾರು ‌30 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಪ್ರಯಾಣಿಕರ ಪೈಕಿ 9 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೆ, ಇನ್ನು ಕೆಲವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಗಳೂರು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಓದಿ :ಬಾಗಲಕೋಟೆ: ಭಾರಿ ಮಳೆಗೆ 65ಕ್ಕೂ ಅಧಿಕ ಮನೆಗಳು ಕುಸಿತ

ABOUT THE AUTHOR

...view details