ದಾವಣಗೆರೆ :ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ಶೀತ, ಕೆಮ್ಮು, ಜ್ವರದಂತಹ ಪ್ರಕರಣಗಳನ್ನು ಜಿಲ್ಲಾಸ್ಪತ್ರೆಗೆ ಉಲ್ಲೇಖಿಸುವ ಮೂಲಕ ಕೊರೊನಾ ಪರೀಕ್ಷೆ ಹೆಚ್ಚಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್ ಬೀಳಗಿ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ ಮತ್ತು ಐಎಂಎ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್-19 ಪರೀಕ್ಷೆಗಳು ಕಡಿಮೆ ವರದಿಯಾಗುತ್ತಿವೆ. ಕೊರೊನಾ ಸೋಂಕಿತರನ್ನು ಪತ್ತೆ ಹಚ್ಚಲು ಕೋವಿಡ್-19 ಪರೀಕ್ಷೆ ಸಂಖ್ಯೆ ಹೆಚ್ಚಬೇಕು. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ತೆರೆದು ಸಕ್ರಿಯರಾಗಿ ಕೆಲಸ ಮಾಡಿದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿ ಕೋವಿಡ್-19 ಪರೀಕ್ಷೆ ನಡೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.