ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.
ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ? - Rajanahalli Valmiki Monastery of Harihara Taluk in Davanagere District
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ..
ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು ಹೆಚ್ಚು ಓಡಾಡುತ್ತಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ.