ಕರ್ನಾಟಕ

karnataka

ETV Bharat / state

ಮೇ.24 ರಂದು ಧಾರವಾಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ - Dharwad district

ಕೊರೊನಾ ಹಿನ್ನೆಲೆ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಧಾರವಾಡ ಜಿಲ್ಲಾ ದ್ಯಂತ ಇದೇ ಭಾನುವಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Prohibition Enforcement In Dharwad district on on May 24: Dharwad DC
ಜಿಲ್ಲಾಧಿಕಾರಿ ದೀಪಾ ಚೋಳನ್

By

Published : May 22, 2020, 8:54 PM IST

ಧಾರವಾಡ:ಕೊರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ (ಭಾನುವಾರ) ಮೇ.24 ರಂದು ಜಿಲ್ಲಾದ್ಯಂತ ಸಿಆರ್​ಪಿಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಈ ಆದೇಶವು ಮೇ.23 ರ ಸಂಜೆ 7 ಗಂಟೆಯಿಂದ ಮೇ.25 ರ ಬೆಳಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲಾದ್ಯಂತ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧವಾಗಿರುತ್ತದೆ‌. ಅಂಗಡಿ ಮುಂಗಟ್ಟುಗಳು ಮುಚ್ಚಿರಬೇಕು. ಯಾವುದೇ ವಾಣಿಜ್ಯ ವಹಿವಾಟುಗಳಿಗೆ ಅವಕಾಶವಿಲ್ಲ. ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿ ದೀಪಾ ಚೋಳನ್

5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ. ಕರ್ಪ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಸರ್ಕಾರಿ ವಾಹನಗಳಿಗೆ ಮತ್ತು ಕೋವಿಡ್ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details