ದಾವಣಗೆರೆ:ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ನಡೆಯಲಿದ್ದು, ಈ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದ ಕೋರಿಕೆಯ ಮೇರೆಗೆ ಜನವರಿ15 ರಿಂದ 25 ರವರೆಗೆ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 0.500 ಟಿ.ಎಂ.ಸಿ ನೀರನ್ನು ಕುಡಿಯಲು ಹರಿಸಲಾಗುತ್ತಿದೆ. ಈ ನದಿ ನೀರನ್ನು ಕುಡಿಯುವ ಹೊರತಾಗಿ ಮತ್ತಾವುದೇ ಉದ್ದೇಶಕ್ಕೆ ಬಳಸದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತುಂಗಭದ್ರ ನದಿ ದಡದಲ್ಲಿ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ - Prohibition on the banks of the Tungabhadra River
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಹರಿಹರ ತಾಲೂಕು ವ್ಯಾಪ್ತಿಯಲ್ಲಿ ಹರಿಯುವ ತುಂಗಭದ್ರಾ ನದಿ ಪಾತ್ರದ ಎಡ ಮತ್ತು ಬಲ ದಂಡೆಗಳ ಮೇಲೆ ಪಂಪ್‍ಸೆಟ್ ಹಾಗೂ ಟ್ಯಾಂಕರ್ಗಳ ಮೂಲಕ ನದಿ ನೀರು ಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತುಂಗಭದ್ರ ನದಿ ದಡದಲ್ಲಿ ನಿಷೇಧಾಜ್ಞೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಹರಿಹರ ತಾಲೂಕು ವ್ಯಾಪ್ತಿಯಲ್ಲಿ ಹರಿಯುವ, ತುಂಗಭದ್ರ ನದಿಪಾತ್ರದ ಎಡ ಮತ್ತು ಬಲ ದಂಡೆಗಳ ಮೇಲೆ ಪಂಪ್‍ಸೆಟ್ ಹಾಗೂ ಟ್ಯಾಂಕರ್ಗಳ ಮೂಲಕ ನದಿ ನೀರು ಎತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನದಿ ಪಾತ್ರಗಳ ಸುತ್ತಮುತ್ತ 500 ಮೀ ವ್ಯಾಪ್ತಿ ಪ್ರದೇಶದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ ಇತ್ಯಾದಿ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.