ದಾವಣಗೆರೆ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಆರ್ಎಂಸಿ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ: ನಾಲ್ವರ ಬಂಧನ - ದಾವಣಗೆರೆಯ ಆರ್ಎಂಸಿ ಪೊಲೀಸ್ ಠಾಣೆ
ಈಗಾಗಲೇ ರಾಜ್ಯ ಸರ್ಕಾರ ಗೋವುಗಳ ಸಾಗಾಟ ಹಾಗೂ ವಧೆಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರೂ ಕೂಡ ಗೋವುಗಳ ಸಾಗಾಟ ನಿಂತಿಲ್ಲ. ಈಗ ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋವುಗಳ ರಕ್ಷಣೆ
ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಎರಡು ಲಾರಿಯಲ್ಲಿ ಸಾಗಿಸುತ್ತಿದ್ದ 16 ಗೋವುಗಳನ್ನು ರಕ್ಷಿಸಲಾಗಿದೆ. ಹಾವೇರಿಯಿಂದ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಲಾರಿ ಚಾಲಕ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಆರ್ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.