ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸುತ್ತಿರುವ ವೇಳೆ ಉದ್ರಿಕ್ತರನ್ನು ಶಾಂತಗೊಳಿಸಲು ಡಿಸಿ ಹಾಗೂ ಎಸ್ಪಿ ರಾಷ್ಟ್ರಗೀತೆ ಹಾಡಿದ್ದಾರೆ. ಆಜಾದ್‌ನಗರ ಪೊಲೀಸ್ ಠಾಣೆ ಮುಂದೆ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಶಾಂತಗೊಳಿಸಲು ರಾಷ್ಟ್ರಗೀತೆ ಹಾಡಿದ ಜಿಲ್ಲಾಧಿಕಾರಿ..
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸುತ್ತಿರುವ ವೇಳೆ ಉದ್ರಿಕ್ತರನ್ನು ಶಾಂತಗೊಳಿಸಲು ಡಿಸಿ ಹಾಗೂ ಎಸ್ಪಿ ರಾಷ್ಟ್ರಗೀತೆ ಹಾಡಿದ್ದಾರೆ.
ಪೊಲೀಸ್ ಠಾಣೆಯ ಒಳಗೆ ಒಂದು ಗುಂಪು, ಪೊಲೀಸ್ ಠಾಣೆ ಎದುರು ಮತ್ತೊಂದು ಗುಂಪಿನಿಂದ ಪ್ರತಿಭಟನೆ ನಡೆಸಲಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದನ್ನು ಅರಿತ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಈ ವೇಳೆ ಪ್ರತಿಭಟನಾನಿರತರು ಪೌರತ್ವ ತಿದ್ದುಪಡಿ ಕಾಯ್ದೆ ರದ್ದು ಪಡಿಸುವವರೆಗೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಆ ವೇಳೆ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಡಿಸಿ ಮಹಾಂತೇಶ ಬೀಳಗಿ ರಾಷ್ಟ್ರಗೀತೆ ಹಾಡಿದರು. ಇದಕ್ಕೆ ಎಸ್ಪಿ ಹನುಮಂತರಾಯ ಕೂಡ ಧ್ವನಿಗೂಡಿಸಿದರು. ಬಳಿಕ ಡಿಸಿ ಅವರ ಜೊತೆ ಪ್ರತಿಭಟನಾಕಾರರು ಕೂಡ ರಾಷ್ಟ್ರಗೀತೆ ಹಾಡಿದರು. ಬಳಿಕ ಪರಿಸ್ಥಿತಿ ಶಾಂತವಾಯಿತು.