ದಾವಣಗೆರೆ:ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಆಗಿದೆ ಎಂಬ ವಿಷಯ ಇದೀಗ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಜಟಾಪಟಿಗೆ ಕಾರಣವಾಗಿದೆ. ಈ ವಿಚಾರವಾಗಿ ಮಾತನಾಡಲು ಕೆಲ ದಿನಗಳ ಹಿಂದೆ ಮಾಜಿ ಶಾಸಕ ಡಿ ಜಿ ಶಾಂತನಗೌಡ ಹೊನ್ನಾಳಿ ಮಹಿಳಾ ತಹಶೀಲ್ದಾರ್ ರಶ್ಮಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಹಾಲಿ ಶಾಸಕ ಎಂ ಪಿ ರೇಣುಕಾಚಾರ್ಯ ಆರೋಪ ಮಾಡಿದ್ದರು.
ಸೋಮವಾರ ಬಿಜೆಪಿ ಹೊನ್ನಾಳಿ ಮಂಡಲ ಮಹಿಳಾ ಮೋರ್ಚಾ ಮಹಿಳಾ ಕಾರ್ಯಕರ್ತರು ಪ್ರತಿಭಟಿಸುವ ಮೂಲಕ ಇದನ್ನು ಖಂಡಿಸಿದರು. ಮಾಜಿ ಶಾಸಕ ಡಿಜಿ ಶಾಂತನಗೌಡ ವಿರುದ್ಧ ಹೊನ್ನಾಳಿಯಲ್ಲಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕ್ರಮಕ್ಕೆ ಆಗ್ರಹಿಸಲಾಯಿತು.