ದಾವಣಗೆರೆ: ರಾಜ್ಯದಲ್ಲಿ ಭೀಕರ ಬರಗಾಲವಿದ್ದರು, ಬರಗಾಲ ನಿರ್ವಹಣೆ ಮಾಡದೇ ಸರ್ಕಾರ ಉರುಳಿಸಲು ಹಾಗೂ ಉಳಿಸಿಕೊಳ್ಳಲು ಜನಪ್ರತಿನಿಧಿಗಳು ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದಾರೆ ಎಂದು ಆರೋಪಿಸಿ ದಾವಣಗೆರೆಯಲ್ಲಿ ಕರ್ನಾಟಕ ಯುವ ಶಕ್ತಿ ವೇದಿಕೆ ಸಿ.ಎಂ. ಚೇರ್ ಹಿಡಿದು ಅಣಕ ಪ್ರತಿಭಟನೆ ನಡೆಯಿತು.
ದಾವಣಗೆರೆಯಲ್ಲಿ ರಾಜಕಾರಣಿಗಳ ವಿರುದ್ಧ ಸಿಎಂ ಚೇರ್ ಹಿಡಿದು ಅಣಕು ಪ್ರತಿಭಟನೆ.... - davanegere
ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಯುವ ಶಕ್ತಿ ವೇದಿಕೆ ಕಾರ್ಯಕರ್ತರು ಸಿ.ಎಂ. ಚೇರ್ ಹಿಡಿದು ಅಣಕ ಪ್ರತಿಭಟನೆ ನಡೆಸಿದರು.
ದಾವಣಗೆರೆಯಲ್ಲಿ ರಾಜಕಾರಣಿಗಳ ವಿರುದ್ಧ ಸಿಎಂ ಚೇರ್ ಹಿಡಿದು ಅಣುಕು ಪ್ರತಿಭಟನೆ
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ಕಳೆದ 15 ದಿನದಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ಹೈಡ್ರಾಮಾದಿಂದ ಜನ ರೋಸಿ ಹೋಗಿದ್ದಾರೆ. ಸರಿಯಾಗಿ ಮಳೆಯಾಗದೇ ಸಾಲದ ಶೂಲದಲ್ಲಿ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕುಡಿಯಲು ನೀರು ಸಹ ಸಿಗುತ್ತಿಲ್ಲ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಕಿದ್ದ ಸರ್ಕಾರಗಳು ಖುರ್ಚಿಗಾಗಿ ಕಿತ್ತಾಟ ನಡೆಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.