ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು, ಅವರಿಗೆ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡುವ ಸಲುವಾಗಿ ಮಾಜಿ ಸಿಎಂ ಜೆ.ಹೆಚ್.ಪಟೇಲ್ ತಮ್ಮನ ಮಗ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ರೈತರು ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಕೇಂದ್ರ ಸರಕಾರ ಪ್ರತಿ ವಸ್ತುವಿನ ಬೆಲೆಯನ್ನು ದುಬಾರಿ ಮಾಡಿದ್ದು ರೈತರು ಹೈರಾಣಾಗಿದ್ದಾರೆ. ಬೆಳೆ ಬೆಳೆಯಲು ಅವಶ್ಯಕವಾಗಿರುವ ಗೊಬ್ಬರ, ಬಿತ್ತನೆ ಬೀಜದ ದರ ಗಗನಕ್ಕೇರಿದೆ. ಇದಲ್ಲದೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ನೀಡದೆ ಇರುವುದು ರೈತ ಸಮುದಾಯವನ್ನು ಸಂಕಷ್ಟಕ್ಕೀಡುಮಾಡಿದೆ ಎಂದು ದೂರಿದರು.