ದಾವಣಗೆರೆ: ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತ ಸಂಘ, ಕಿಸಾನ್ ಘಟಕ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ತಡೆ ನಡೆಸಿದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೂರಾರು ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ದಾವಣಗೆರೆಯಲ್ಲಿ ಹೆದ್ದಾರಿ ತಡೆ ದಾವಣಗೆರೆಯಲ್ಲಿ ಹೆದ್ದಾರಿ ತಡೆ ದಾವಣಗೆರೆಯಲ್ಲಿ ಹೆದ್ದಾರಿ ತಡೆ ಈ ಹಿಂದೆ ಹಲವು ಬಾರಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಇದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಕೂಡಲೇ ಖರೀದಿ ಕೇಂದ್ರ ಆರಂಭಿಸಿ ಅನ್ನದಾತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಮಳೆ ಸುರಿದ ಪರಿಣಾಮ ಮೆಕ್ಕೆಜೋಳ ಬೆಳೆ ಹಾಳಾಗಿದೆ. ಬೆಂಬಲ ಬೆಲೆ ನೀಡಿ ಮೆಕ್ಕೆಜೋಳ ಖರೀದಿಸಬೇಕು. ಸಾಲ ಮಾಡಿ ಬೆಳೆದಿದ್ದ ರೈತರು ಈಗ ಕಂಗೆಟ್ಟಿದ್ದು, ಮೆಕ್ಕೆಜೋಳ ದಾಸ್ತಾನು ಮಾಡಲು ಆಗದೇ ಮತ್ತಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.