ದಾವಣಗೆರೆ:ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ದಾವಣಗೆರೆ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು.
ಬೆಣ್ಣೆನಗರಿಯಲ್ಲಿ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - Davangere
ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೆಣ್ಣೆನಗರಿಯಲ್ಲಿ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ನಗರದ ಜಯದೇವ ವೃತ್ತದಿಂದ ಮೆರವಣಿಗೆ ಮೂಲಕ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ರೈತರು, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆಗಳು ಹಾಳಾಗಿವೆ. ದಾವಣಗೆರೆ ತಾಲ್ಲೂಕಿನ ಸುತ್ತಾಮುತ್ತ ಬೆಳೆಗಳು ಸಂಪೂರ್ಣವಾಗಿ ಹಾಳಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೀಗಾಗಲೇ ಕೆಲವು ಪ್ರದೇಶಗಳಲ್ಲಿ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದು, ಇನ್ನೂಳಿದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ನೀಡಬೇಕು ಎಂದು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹಿಸಿದ್ದಾರೆ.