ದಾವಣಗೆರೆ:ಕಾಲೇಜು ಆಡಳಿತ ಮಂಡಳಿಯು ಕೆಲ ಶಿಕ್ಷಕರನ್ನು ಸೇವೆಯಿಂದ ತೆಗೆದು ಹಾಕಿದ್ದು, ಆಡಳಿತ ಮಂಡಳಿಯ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜು ಆರಂಭದ ದಿನವೇ ದಾವಣಗೆರೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ - Davanagere latest news
ಕಾಲೇಜು ಆರಂಭದ ದಿನವೇ ನಗರದಲ್ಲಿ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಂದ ಪ್ರತಿಭಟನೆ
ದಾವಣಗೆರೆ ಹೊರವಲಯದ ನಗರದ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ತಮ್ಮ ನೆಚ್ಚಿನ ಶಿಕ್ಷಕರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಅವರು ಆಗ್ರಹಿಸಿದರು.
ವಿದ್ಯಾರ್ಥಿಗಳು ಹೋರಾಟ ಮಾಡಿದರೂ ಕೂಡ ಜೈನ್ ಕಾಲೇಜಿನ ಆಡಳಿತ ಮಂಡಳಿ ಈ ಬಗ್ಗೆ ಕಾಳಜಿ ವಹಿಸಿಲ್ಲ. ಇದರಿಂದ ಪ್ರತಿಭಟನೆಯನ್ನು ತೀವ್ರಗೊಳಿಸಿ ವಿದ್ಯಾರ್ಥಿಗಳು ಆಕ್ರೋಶಿತರಾದರು.