ದಾವಣಗೆರೆ:2018-19ನೇ ಸಾಲಿನ ಕೊಳವೆ ಬಾವಿ ಫಲಾನುಭವಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಪ್ರೊ. ಕೃಷ್ಣಪ್ಪ ಡಿಎಸ್ಎಸ್ ಬಣದಿಂದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕೊಳವೆ ಬಾವಿ ಫಲಾನುಭವಿಗಳಿಗೆ ಅಧಿಕಾರಿಯಿಂದ ವಂಚನೆ ಆರೋಪ: ಪ್ರತಿಭಟನೆ - ದಾವಣಗೆರೆ ಲೆಟೆಸ್ಟ್ ನ್ಯೂಸ್
2018-19ನೇ ಸಾಲಿನ ಕೊಳವೆ ಬಾವಿ ಫಲಾನುಭವಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಪ್ರೊ. ಕೃಷ್ಣಪ್ಪ ಡಿಎಸ್ಎಸ್ ಬಣದಿಂದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
2018-19ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಸರ್ಕಾರದಿಂದ ಕೊಳವೆ ಬಾವಿ ಕೊರೆಸಲು ಅನುಮತಿ ನೀಡಲಾಗಿತ್ತು. ಆದ್ರೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಕೇವಲ ನಾಲ್ಕು ಜನ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಸಿ ನಂತರ ಸರ್ಕಾರದಿಂದ ಮಾದಿಗ ಸಮುದಾಯಕ್ಕೆ ಕೊಳವೆ ಬಾವಿ ಕೊರೆಸಲು ಆದೇಶ ನೀಡಿಲ್ಲ ಎಂದು ಹೇಳುತ್ತಿದ್ದಾರೆ. ಅಲ್ಲದೇ ಇತ್ತೀಚೆಗೆ ಆದಂತಹ ಆದಿ ಜಾಂಬವ ಸಮುದಾಯಕ್ಕೆ ಮಾತ್ರ ಕೊಳವೆ ಬಾವಿ ಕೊರೆಸುತ್ತಿದ್ದು, ನಮ್ಮ ಜನಾಂಗಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿದರು. ಕೂಡಲೇ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಯನ್ನ ವರ್ಗಾವಣೆ ಮಾಡಬೇಕು. ಇಲ್ಲವಾದಲ್ಲಿ ಎಸ್ಸಿ ಸಮುದಾಯದ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಸಬೇಕು ಎಂದು ಆಗ್ರಹಿಸಿದರು.