ಕರ್ನಾಟಕ

karnataka

ETV Bharat / state

ದಾವಣಗೆರೆ: ಪರಿಸರಪ್ರೇಮಿ ಸಾಲುಮರದ ವೀರಾಚಾರಿ ಮೃತದೇಹವಿಟ್ಟು ಪ್ರತಿಭಟನೆ - ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು

ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿಯವರ ಮೃತದೇಹವಿಟ್ಟು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲಾಯಿತು.

ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ಮೃತದೇಹವಿಟ್ಟು ಪ್ರತಿಭಟನೆ
ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ಮೃತದೇಹವಿಟ್ಟು ಪ್ರತಿಭಟನೆ

By

Published : Sep 21, 2022, 3:41 PM IST

ದಾವಣಗೆರೆ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿಯವರ ಮೃತದೇಹವಿಟ್ಟು ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ನ್ಯಾಯಬೆಲೆ ಅಂಗಡಿಯಲ್ಲಿ ನಡೆದ ಭ್ರಷ್ಟಾಚಾರದ ವಿರುದ್ದ ಹೋರಾಟ ನಡೆಸುತ್ತಿದ್ದ ಸಾಲುಮರದ ವೀರಾಚಾರಿಯವರು ನ್ಯಾಯ ಸಿಗದ ಹಿನ್ನೆಲೆಯಲ್ಲಿ ಕಳೆದ ದಿನ ನೇಣಿಗೆ ಶರಣಾಗಿದ್ದರು. ಇದರಿಂದ ಇಂದು ಮಿಟ್ಲಕಟ್ಟೆ ಗ್ರಾಮದಲ್ಲಿ ಪಡಿತರ ಅಂಗಡಿಯ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಹಾಗೂ ನ್ಯಾಯಬೆಲೆ ಅಂಗಡಿ ರದ್ದು ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು, ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು, ರೈತ ಸಂಘಟನೆ ಹಾಗೂ ಪರಿಸರ ಪ್ರೇಮಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡುವಂತೆ ಒತ್ತಾಯಿಸಿದ್ದು, ಅಲ್ಲದೆ ವೀರಾಚಾರಿ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಮನವಿ ಮಾಡಲಾಯಿತು.

ಪರಿಸರಪ್ರೇಮಿ ಸಾಲುಮರದ ವೀರಾಚಾರಿ ಮೃತದೇಹವಿಟ್ಟು ಪ್ರತಿಭಟನೆ

ಈ ಎಲ್ಲಾ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುವ ಮೂಲಕ ಬೇಡಿಕೆಗಳು ಈಡೇರಿಸುವಂತೆ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳು ನೀಡುವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿಯಲಾಯಿತು. ಇದೇ ವೇಳೆ ಪ್ರತಿಭಟನಾನಿರತ ಗ್ರಾಮಸ್ಥರಿಗೆ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು, ರೈತ ಸಂಘಟನೆ ಹಾಗೂ ಪರಿಸರ ಪ್ರೇಮಿಗಳು ಸಾತ್​​ ನೀಡಿದ್ರು.

ಓದಿ:ವಿಮಾನ ನಿಲ್ದಾಣ ಸಂಪರ್ಕಿಸುವ ಬಳ್ಳಾರಿ ರಸ್ತೆ ವಿಸ್ತರಣೆ ಕ್ರಮಗಳ ಬಗ್ಗೆ ತಿಳಿಸಿ: ಹೈಕೋರ್ಟ್

ABOUT THE AUTHOR

...view details