ಹರಿಹರ: ಇಲ್ಲಿನ ಮುಖ್ಯ ರಸ್ತೆಯಾದ ಕೆಇಬಿಯಿಂದ ಹೊಸ ಸೇತುವೆವರೆಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ವಿದ್ಯುತ್ ದೀಪ ಅಳವಡಿಸಿ ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.
ಹರಿಹರ: ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ - Jaya Karnataka organization protest news
ಹರಿಹರದ ಕೆಇಬಿ ರಸ್ತೆಯಿಂದ ಹೊಸ ಸೇತುವೆವರೆಗೂ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಹಾಗೂ ನಗರದಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಸಂಘಟನೆ ಮುಖಂಡರು, ಈ ಕುರಿತು ನಮ್ಮ ಜಯ ಕರ್ನಾಟಕ ಸಂಘಟನೆಯಿಂದ ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿಲ್ಲ. ರಸ್ತೆಯ ಮಧ್ಯ ಭಾಗದಲ್ಲಿ ನೀರು ನಿಂತು ವಾಹನ ಸವಾರರು, ಪಾದಚಾರಿಗಳಿಗೆ ಅಪಘಾತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ತಾತ್ಕಾಲಿಕವಾಗಿ ರಸ್ತೆಯನ್ನು ಡಾಂಬರೀಕರಣ ಮಾಡಬೇಕು ಹಾಗೂ ನಗರದಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು ಎಂದು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಗೋವಿಂದ, ಶೇಖರಪ್ಪ ದೀಟೂರು, ಇರ್ಫಾನ್, ಚಂದ್ರಪ್ಪ, ಮಣಿ ಭರತ್, ಹರೀಶ್, ರಾಜು, ರಘು, ಬಸವರಾಜಪ್ಪ, ರಾಜಪ್ಪ, ಶಿವಯ್ಯ, ಸೋಮಣ್ಣ, ಅಂಜನಪ್ಪ ಮತ್ತು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.