ದಾವಣಗೆರೆ:ಒಂದೆಡೆ ಕರ್ನಾಟಕ ರಾಜಕಾರಣದಲ್ಲಿ ಹೈಡ್ರಾಮಾ ನಡೆಯುತ್ತಿದ್ದು, ರೈತರ ಬಗ್ಗೆ, ಬರಗಾಲ ನಿರ್ವಹಣೆ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ. ಈ ಹಿನ್ನೆಲೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರೈತರ ಬಗ್ಗೆ ಕಾಳಜಿ ವಹಿಸಿದ್ದು, ಮೋಡ ಬಿತ್ತನೆ ಮಾಡಿ ರೈತರನ್ನು ಕಾಪಾಡಿ ಎಂದು ಸರ್ಕಾರಕ್ಕೆ ಮೊರೆ ಇಟ್ಟಿದೆ.
ಮೋಡ ಬಿತ್ತನೆ ಮಾಡಿ ರೈತರನ್ನ ಕಾಪಾಡಿ: ಸರ್ಕಾರದ ವಿರುದ್ಧ ಪ್ರತಿಭಟನೆ - undefined
ಸರ್ಕಾರ ಬರಗಾಲದ ಬಗ್ಗೆ ತಲೆ ಕೆಡಿಸಿಕೊಳ್ಳದೇ ಹೈಡ್ರಾಮಾ ಆಡುತ್ತಿದೆ ಎಂದು ದಾವಣೆಗೆಯಲ್ಲಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.
ಹೌದು.. ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಸಿಎಂ ಆಗಿ ಮುಂದುವರೆಯಲಿ ಎಂದು ಉರುಳು ಸೇವೆ ಮಾಡಿದ್ರೆ, ಇತ್ತ ಯಡಿಯೂರಪ್ಪ ಸಿಎಂ ಆಗಲಿ ಎಂದು ಬಿಎಸ್ವೈ ಅಭಿಮಾನಿಗಳು ಪೂಜೆ, ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ರೈತರ ಬಗ್ಗೆ, ಬರಗಾಲ ನಿರ್ವಹಣೆ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ, ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ರೈತರು ಬರಗಾಲದಿಂದ ತತ್ತರಿಸಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತಿದೆ. ಈ ಹಿನ್ನೆಲೆ ಸರ್ಕಾರ ತನ್ನ ಹೈಡ್ರಾಮಾ ಬದಿಗಿಟ್ಟು ಬರಗಾಲ ನಿರ್ವಹಣೆ ಬಗ್ಗೆ ಕ್ರಮ ವಹಿಸಿಕೊಳ್ಳಬೇಕು. ಇನ್ನು ಮೋಡ ಬಿತ್ತನೆ ಹೊಣೆ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಜೂನ್ ಹಾಗೂ ಜುಲೈನಲ್ಲಿ ಮೋಡ ಬಿತ್ತನೆ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಲೇ ಇದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.