ಕರ್ನಾಟಕ

karnataka

ETV Bharat / state

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ - ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯಲ್ಲಿ ಕಾರ್ಮಿಕರ ಪ್ರತಿಭಟನೆ

ಕೇಂದ್ರ ಸರ್ಕಾರ ಬಡವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಹಾಗೂ ಕಾರ್ಮಿಕರ ವಿರೋಧಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾನಿರತ ಕಾರ್ಮಿಕರು

By

Published : Nov 25, 2019, 5:59 PM IST

ದಾವಣಗೆರೆ:ಕೇಂದ್ರ ಸರ್ಕಾರ ಬಡವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಹಾಗೂ ಕಾರ್ಮಿಕರ ವಿರೋಧಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಮಿಕ ಸಂಘಟನೆ, ಕೇಂದ್ರದಲ್ಲಿ ನರೇಂದ್ರ ಮೋದಿಯವರು ಬಂದ ಬಳಿಕ ಕಾರ್ಮಿಕ ನೀತಿ ಬದಲಾಗುತ್ತಿದೆ. ಕಾರ್ಮಿಕ‌ ಕಾಯ್ದೆ ತಿದ್ದುಪಡಿ ತಂದು ಕಾರ್ಮಿಕರಿಗೆ ತೊಂದರೆ ಕೊಡಲಾಗುತ್ತಿದೆ. ಕಾರ್ಮಿರಿಗೆ ಮರಣ ಶಾಸನ‌ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ಕಾರ್ಮಿಕರು

ದೇಶದ ಅಸಂಘಟಿತ ಕಾರ್ಮಿಕರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ವಿಫಲರಾಗಿದ್ದಾರೆ. ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಮಾಡುವುದಾಗಿ ಸುಳ್ಳು ಭರವಸೆ ನೀಡುವ ಮೂಲಕ ಮೋಸ ಮಾಡಿದ್ದಾರೆ. ದೇಶದಲ್ಲಿ 75%ರಷ್ಟು ಅಸಂಘಟಿತ ಕಾರ್ಮಿಕರಿದ್ದು, ಕಾರ್ಮಿಕರ ಪರವಾಗಿ ಮೋದಿಯವರು ಯಾವ ಒಳಿತನ್ನೂ‌ ಮಾಡಲಿಲ್ಲ ಎಂದು ದೂರಿದರು.

ಡಿಸೆಂಬರ್​​ನಲ್ಲಿ ನಡೆಯುವ ಸಂಸತ್ ಅಧಿವೇಶನದಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿದ್ದಾರೆ. ಈ ನೀತಿಗಳನ್ನು ರದ್ದುಗೊಳಿಸಿ ಕಾರ್ಮಿಕರಿಗೆ ಅನುಕೂಲವಾಗುವ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details