ದಾವಣಗೆರೆ: ದೇಶದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್ಡೌನ್ ಆದೇಶವನ್ನ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಾಲೂಕು ಆಡಳಿತದಿಂದ ಅಗತ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ರಾಮಪ್ಪ ತಿಳಿಸಿದ್ದಾರೆ.
ಸಾರ್ವಜನಿಕರು ಕಟ್ಟುನಿಟ್ಟಾಗಿ ಆದೇಶ ಪಾಲಿಸಬೇಕು: ಶಾಸಕ ರಾಮಪ್ಪ ಮನವಿ - Davanagere News
ದೇಶದಲ್ಲಿ ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್ಡೌನ್ ಆದೇಶವನ್ನ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಾಲೂಕು ಆಡಳಿತದಿಂದ ಅಗತ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ಎಸ್.ರಾಮಪ್ಪ ತಿಳಿಸಿದ್ದಾರೆ.
ಲಾಕ್ಡೌನ್ ಆದೇಶವನ್ನ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು:ಶಾಸಕ ಎಸ್.ರಾಮಪ್ಪ
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್‌ನಿಂದ ವಿಶ್ವದ ಅನೇಕ ರಾಷ್ಟ್ರಗಳು ತೀವ್ರ ಸಂಕಷ್ಟದಲ್ಲಿವೆ. ಸಾವಿರಾರು ಜನ ಜೀವ ಕಳೆದುಕೊಂಡಿದ್ದಾರೆ, ಜನಜೀವನ ಅಸ್ತವ್ಯಸ್ತವಾಗಿದೆ. ಸಾರ್ವಜನಿಕರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಈ ಮಹಾಮಾರಿಯನ್ನು ಹರಡದಂತೆ ತಡೆಗಟ್ಟಲು ಸಹಕರಿಬೇಕು. ಅಲ್ಲದೆ,ನಗರದ 31ನೇ ವಾರ್ಡ್‌ಗಳ ನಗರಸಭೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸುವ ಜತೆಗೆ ಅಗತ್ಯ ವಸ್ತುಗಳ ಸರಬರಾಜಿಗೆ ಜಾಗಗಳನ್ನು ಗುರುತಿಸಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.