ಕರ್ನಾಟಕ

karnataka

ETV Bharat / state

5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯ;  ಜ.19 ರಿಂದ ಪ್ರಾರಂಭ - ಪಲ್ಸ್​ ಪೋಲಿಯೋ ಅಭಿಯಾನ

ಜ.19 ರಿಂದ 22 ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0 ದಿಂದ 5 ವರ್ಷದೊಳಗಿನ ಪ್ರತಿ ಮಕ್ಕಳಿಗೂ ಪೋಲೀಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

Davangere
ಮಹಾನಗರಪಾಲಿಕೆ ಸಭಾಂಗಣ

By

Published : Jan 9, 2020, 8:33 AM IST

ದಾವಣಗೆರೆ:ನಗರದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ತಲುಪಬೇಕು. ಲಸಿಕೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪಾಲಿಕೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ್ ಪಿ ಮುದಜ್ಜಿ ತಿಳಿಸಿದರು.

ಜ.19 ರಿಂದ 22 ರವರೆಗೆ ನಡೆಯುವ ಮೊದಲನೇ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ (ಎನ್‍ಐಡಿ-2020) ಕುರಿತು ಚರ್ಚಿಸಲು ಮಹಾನಗರಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅರ್ಬನ್ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಗರದ 240 ಬೂತ್‍ಗಳಲ್ಲಿ ನಡೆಯಲಿದ್ದು, ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ದೇಶದಾದ್ಯಂತ ಜ.19 ರಿಂದ 22 ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲೀಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದರು

ನಗರದಲ್ಲಿರುವ ಕೊಳಗೇರಿಗಳಲ್ಲಿ 60 ಮಕ್ಕಳು ಮತ್ತು ಲಸಿಕೆ ಸೌಲಭ್ಯ ಇಲ್ಲದ ಪ್ರದೇಶಗಳಲ್ಲಿ ಒಟ್ಟು 7,947 ಮಕ್ಕಳನ್ನು ಗುರುತಿಸಲಾಗಿದ್ದು, ಈ ಮಕ್ಕಳಿಗೆ ಲಸಿಕೆ ನೀಡುವುದು ಪ್ರಮುಖ ಜವಾಬ್ದಾರಿಯಾಗಿದೆ. ನಗರ ಪ್ರದೇಶದಲ್ಲಿ ಜ.19 ರಂದು ಬೂತ್ ದಿನವನ್ನಾಗಿ ಆಚರಿಸಿ ಜ.20, 21, 22 ರಂದು ಮನೆ ಮನೆ ಭೇಟಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details