ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ ಮತ್ತೆ ಶುರುವಾಯ್ತ ಪ್ರಶ್ನೆ ಪತ್ರಿಕೆ ಮಾಫಿಯಾ! - ಟಿಇಟಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಪತ್ತೆ

ಪ್ರಶ್ನೆ ಪತ್ರಿಕೆಯ ಸೋರಿಕೆ ಜಾಲವನ್ನು ಮಟ್ಟ ಹಾಕಲು ಎಷ್ಟೇ ಪ್ರಯತ್ನಪಟ್ಟರೂ ಸಫಲವಾಗುತ್ತಿಲ್ಲ. ಇತ್ತೀಚೆಗೆ ನಡೆದ ಟಿಇಟಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ದಾವಣಗೆರೆಯ ಮನೆಯೊಂದರಲ್ಲಿ ದೊರೆತಿದ್ದು, ಮತ್ತೆ ಪ್ರಶ್ನೆ ಪತ್ರಿಕೆ ಮಾಫಿಯಾ ತಲೆ ಎತ್ತಿದೆ ಎಂಬ ಅನುಮಾನ ಕಾಡತೊಡಗಿದೆ.

ದಾವಣಗೆರೆಯಲ್ಲಿ ಪ್ರಶ್ನೆ ಪತ್ರಿಕೆ ಮಾಫಿಯಾ

By

Published : Sep 28, 2019, 6:08 PM IST

ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮನೆಯೊಂದರಲ್ಲಿಟಿಇಟಿ ಪರೀಕ್ಷೆಯ ಬಂಡಲ್ ಗಟ್ಟಲೆ ಪ್ರಶ್ನೆ ಪತ್ರಿಕೆ ಪತ್ತೆಯಾಗಿರುವುದು ಈ ಅನುಮಾನ ಬಲಗೊಳ್ಳಲು ಕಾರಣವಾಗಿದೆ.

ದಾವಣಗೆರೆಯಲ್ಲಿ ಪ್ರಶ್ನೆ ಪತ್ರಿಕೆ ಮಾಫಿಯಾ

ಮೇ 26 ರಂದು ನಡೆದಿದ್ದ ಟಿಇಟಿ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಪತ್ತೆಯಾಗಿದ್ದು, ದಾವಣಗೆರೆಯ ಕೆಟಿಜೆ ನಗರದ 17 ನೇ ಕ್ರಾಸ್ ನ ಮನೆಯಲ್ಲಿ ‌ಪ್ರಶ್ನೆ ಪತ್ರಿಕೆಗಳು ಸಿಕ್ಕಿವೆ.

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಪರೀಕ್ಷೆ ಪ್ರಶ್ನೆ ಪತ್ರಿಕೆ ಬಂಡಲ್ ಗಟ್ಟಲೆ ಪತ್ತೆಯಾಗಿದ್ದು, ಪೊಲೀಸರ ದಾಳಿ ನಂತರ ಪ್ರಕರಣ ಬಯಲಿಗೆ ಬಂದಿದೆ. ಕೆಟಿಜೆ ನಗರ ಪೊಲೀಸರು ಪ್ರಶ್ನೆ ಪತ್ರಿಕೆ ಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ABOUT THE AUTHOR

...view details