ದಾವಣಗೆರೆ: ರಾಜ್ಯದಲ್ಲಿ ಸಮಸ್ಯೆಗಳು ಬೆಟ್ಟದಷ್ಟಿವೆ, ಆ ಸಮಸ್ಯೆಗಳನ್ನು ರಾಜಕಾರಣಿಗಳು ಬಗೆಹರಿಸಬೇಕು, ಆದರೆ ಕೆಲಸಕ್ಕೆ ಬಾರದ ವಿಚಾರಗಳನ್ನು ದೊಡ್ಡದಾಗಿ ಮಾಡಿ, ಜನರ ಮನಸ್ಸುಗಳನ್ನು ಕೆಡಿಸುವ ಕೆಲಸವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ ಎಂದು ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಹೂವಿನಮಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿ ಸಂಘರ್ಷ ನಿರಂತರವಾಗಿ ನಡೆಯುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮದು. ರಾಜಕೀಯ ಸಂಘರ್ಷದಲ್ಲಿ ಧರ್ಮನಾಶವಾಗದಿರಲಿ. ರಾಜಕೀಯದಲ್ಲಿ ಧರ್ಮ ಇದ್ದರೆ ಮಾತ್ರ ಕಲ್ಯಾಣ ಸಾಧ್ಯ ಎಂದು ಹೇಳಿದರು.