ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಹಜ ಸಾವಲ್ಲ. ಆತನನ್ನು ಮುಗಿಸಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
'ರಮೇಶ್ ಅವರದ್ದು ಸಹಜ ಸಾವಲ್ಲ, ಆತನನ್ನು ಮುಗಿಸಲಾಗಿದೆ' - davanagere news
ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವು ಸಹಜ ಸಾವಲ್ಲ, ಆತನನ್ನು ಮುಗಿಸಲಾಗಿದೆ. ಆತನ ಸಾವಿಗೆ ಬೇರೆ ಬೇರೆ ಕಾರಣಗಳಿವೆ. ಇದಕ್ಕೆಲ್ಲ ಡಾ. ಜಿ. ಪರಮೇಶ್ವರ್ ಉತ್ತರಿಸಬೇಕು ಎಂದಿದ್ದಾರೆ.
ನಗರದ ನಾಯಕರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅವರದ್ದು ಸಹಜ ಸಾವಲ್ಲ, ಆತನನ್ನು ಮುಗಿಸಲಾಗಿದೆ. ಆತನ ಸಾವಿಗೆ ಬೇರೆ ಬೇರೆ ಕಾರಣಗಳು ಇವೆ. ಇದಕ್ಕೆಲ್ಲ ಡಾ.ಜಿ.ಪರಮೇಶ್ವರ್ ಉತ್ತರಿಸಬೇಕು ಎಂದಿದ್ದಾರೆ.
ಸಾವಿಗೆ ಐಟಿ ಅಥವಾ ಕೇಂದ್ರ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಐಟಿ ಇಲಾಖೆಗೂ ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮೇಲಾಗಿ ಪರಮೇಶ್ವರ್ ಬೆಂಗಳೂರಿನಲ್ಲಿಯೇ ಇದ್ದರು. ಆದ್ರೂ ಸಹ ಅಧಿವೇಶನದಲ್ಲಿ ಏಕೆ ಭಾಗವಹಿಸಲಿಲ್ಲ. ಸದಸದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಬಹುದಿತ್ತು. ರಮೇಶ್ ಸಾವಿನ ಬಗ್ಗೆ ನಾನಾ ಸಂಶಯಗಳಿವೆ. ಇದು ತನಿಖೆಯಿಂದ ಬೆಳಕಿಗೆ ಬರಲಿದೆ ಎಂದು ಹೇಳಿದ್ದಾರೆ.