ದಾವಣಗೆರೆ:ದಲಿತರ ಕ್ಷೌರ ಮಾಡಲು ಕ್ಷೌರಿಕರು ಹಿಂದೇಟು ಹಾಕಿದ್ದಾರೆ ಎನ್ನಲಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೂದಿಹಾಳ್ ಗ್ರಾಮದಲ್ಲಿ ವರದಿಯಾಗಿದೆ. ಇದರಿಂದಾಗಿ ದಲಿತರು ಹೇರ್ ಕಟಿಂಗ್ ಮಾಡಿಸಿಕೊಳ್ಳಲು ತೊಂದರೆ ಅನುಭವಿಸುವಂತಾಗಿದೆ.
ಈ ಸಮಸ್ಯೆ ಬಗೆಹರಿಸಲು ಗ್ರಾಮಕ್ಕೆ ಪೊಲೀಸರು ಆಗಮಿಸಿದ್ದರು. ಕ್ಷೌರದಂಗಡಿ ಬಳಿ ತೆರಳಿದ ಮಲೇಬೆನ್ನೂರು ಪೊಲೀಸರು ದಲಿತರಿಗೂ ಕ್ಷೌರ ಮಾಡುವಂತೆ ತಾಕೀತು ಮಾಡಿದ್ದಾರೆ. ಆದ್ರೆ ದಲಿತರು ಕ್ಷೌರ ಮಾಡಿಸಿಕೊಳ್ಳಲು ತೆರಳಿದ್ರೆ, ವಾಪಸ್ ಕಳುಹಿಸಿದ್ದಾರೆ ಎನ್ನಲಾಗ್ತಿದೆ.