ಕರ್ನಾಟಕ

karnataka

ETV Bharat / state

ತಾಕತ್ತು ತೋರಿಸಲು ಕುಸ್ತಿ ಅಖಾಡವಲ್ಲ, ಕೇಂದ್ರದಿಂದ ಪರಿಹಾರ ಬಂದೇ ಬರುತ್ತೆ: ಸಿ ಸಿ ಪಾಟೀಲ್ - ರಾಜ್ಯ ಸರ್ಕಾರ

ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್, ತಾಕತ್ತು ತೋರಿಸಲು ಇದು ಕುಸ್ತಿ ಅಖಾಡವಲ್ಲ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್ ಮಾತನಾಡಿದ್ದಾರೆ

By

Published : Oct 3, 2019, 11:26 PM IST

ದಾವಣಗೆರೆ : ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್, ತಾಕತ್ತು ತೋರಿಸಲು ಇದು ಕುಸ್ತಿ ಅಖಾಡವಲ್ಲ, ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ. ಸಿ. ಪಾಟೀಲ್
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತಿಹಾಸ ಪುಟಗಳನ್ನು ತಿರುವಿ ನೋಡಿದ್ರೆ ಹಿಂದಿನ ಕೇಂದ್ರ ಸರ್ಕಾರಗಳಿಂದ ಎಷ್ಟು ಪರಿಹಾರ ಬಂದಿದೆ ಎಂಬುದು ಗೊತ್ತಾಗುತ್ತದೆ. ರಾಜ್ಯ ಸರ್ಕಾರ ನಿರಾಶ್ರಿತರಿಗೆ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಿದೆ. ಕೈಕಟ್ಟಿ ನಾವು ಕುಳಿತಿಲ್ಲ. ಇನ್ನೆರಡು ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೊಸ ವಿಚಾರ ಬಂದಾಗ ಸಹಜವಾಗಿಯೇ ಪರ-ವಿರೋಧ ಚರ್ಚೆ ಆಗುತ್ತದೆ. ನೂತನ ವಿಜಯನಗರ ಜಿಲ್ಲೆ ರಚನೆ ವಿಚಾರ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ರು.

ABOUT THE AUTHOR

...view details