ಕರ್ನಾಟಕ

karnataka

ETV Bharat / state

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರೇಣುಕಾಚಾರ್ಯ ಭಾಗಿ.. ಕೋವಿಡ್ ನಿಯಮ ಧೂಳಿಪಟ! - Renukacharya breaks covid rules in Davanagere

ಶಾಸಕ ಎಂ ಪಿ ರೇಣುಕಾಚಾರ್ಯ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಮಾಡಿ ದುರ್ಗಾಂಭಿಕ ದೇವಿಯ ಜಾತ್ರಾ ಮಹೋತ್ಸವ ಹಾಗು ಅದೇ ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

renukacharya-breaks-covid-rules-in-davanagere
ಜಾತ್ರೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರೇಣುಕಾಚಾರ್ಯ ಬಾಗಿ

By

Published : Jan 10, 2022, 4:18 PM IST

ದಾವಣಗೆರೆ:ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ ರೇಣುಕಾಚಾರ್ಯರಿಂದ ಮತ್ತೆ ಕೋವಿಡ್ ನಿಯಮಾವಳಿ ಉಲ್ಲಂಘನೆಯಾಗಿದೆ. ಇದರಿಂದ ಜನರಿಗೆ ಒಂದು ನಿಯಮಾವಳಿ, ಜನಪ್ರತಿನಿಧಿಗಳಿಗೆ ಒಂದು ಕೋವಿಡ್ ನಿಯಮಾವಳಿಯಾ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

ಶಾಸಕರು ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಮಾಡಿ ದುರ್ಗಾಂಭಿಕ ದೇವಿಯ ಜಾತ್ರಾ ಮಹೋತ್ಸವ ಹಾಗು ಅದೇ ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ದೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗ್ತಿದೆ.

ಕೋವಿಡ್ ನಿಯಮ ಉಲ್ಲಂಘಿಸಿದ ರೇಣುಕಾಚಾರ್ಯ

ಸಾಮಾಜಿಕ ಅಂತರವಿಲ್ಲ, ಮಾಸ್ಕ್ ಇಲ್ಲದೆ ಸ್ಪರ್ಧೆಯಲ್ಲಿ ಭಾಗಿಯಾಗಿರುವುದು ಅಡಳಿತ ಪಕ್ಷದ ಶಾಸಕರಿಂದಲೇ ಪದೇ ಪದೆ ಕೋವಿಡ್ ನಿಯಮಾವಳಿ ಉಲ್ಲಂಘನೆಯಾಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸಾವಿರಾರು ಜನರು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದು, ಜನರಿಗೆ ಮಾತ್ರ ಕೋವಿಡ್ ನಿಯಮಾವಳಿ ಪಾಲನೆ ಮಾಡಿ ಎಂದು ಮನವಿ‌ ಮಾಡುವ ಶಾಸಕರೇ ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದಲ್ಲದೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಿಯಮ ಉಲ್ಲಂಘನೆ ಆಗಿದ್ದು, ಜಿಲ್ಲಾಡಳಿತ ಕ್ರಮ ಜರುಗಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಓದಿ:'ಹಾಡಿದ್ದೇ ಹಾಡೋ ಕಿಸಬಾಯಿದಾಸ ಅನ್ನೋಹಾಗೆ ಸಿದ್ದರಾಮಯ್ಯ ಹೇಳಿದ್ದೇ ಹೇಳ್ತಾರೆ'

For All Latest Updates

TAGGED:

ABOUT THE AUTHOR

...view details