ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೆ ಆಶ್ಚರ್ಯವೇನಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೆ ಆಶ್ಚರ್ಯವೇನಿಲ್ಲ.. ರೇಣುಕಾಚಾರ್ಯ ಭವಿಷ್ಯ! - latest davangere news
ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೆ ಆಶ್ಚರ್ಯವೇನಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಮೂರು ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಸ್ಥಾನ ಕಾಂಗ್ರೆಸ್ನಲ್ಲಿ ಖಾಲಿ ಇತ್ತು. ಕಾಡಿ ಬೇಡಿ ಪ್ರತಿಪಕ್ಷದ ನಾಯಕ ಸ್ಥಾನವನ್ನು ಸಿದ್ದರಾಮಯ್ಯ ಪಡೆದಿದ್ದಾರೆಂದು ವ್ಯಂಗ್ಯವಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಗ್ಗೆ ಗೋಲಿ ಆಡುವವರೆಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ತೊರೆದ್ರೂ ತೊರೆಯಬಹುದು, ಇದರಲ್ಲಿ ಆಶ್ಚರ್ಯವೇನಿಲ್ಲವೆಂದು ಭವಿಷ್ಯ ನುಡಿದರು.
ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರೈತರ ಮನವಿಗೆ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.