ದಾವಣಗೆರೆ: ಶಾಲೆ-ಕಾಲೇಜುಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ತಮ್ಮದೇ ಶೈಲಿಯಲ್ಲಿ ಶಾಲೆಯ ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಬಿಸಿಯೂಟ ಸವಿದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮಕ್ಕಳಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು. ಹೊನ್ನಾಳಿ ತಾಲೂಕಿನ ಹನಗವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೊಂದಿಗೆ ಮಧ್ಯಾಹ್ನನದ ಬಿಸಿಯೂಟ ಸೇವಿಸಿ ಕೆಲ ಕಾಲ ಮಕ್ಕಳೊಂದಿಗೆ ಕಾಲ ಕಳೆದರು.