ದಾವಣಗೆರೆ: ಅಲ್ಪಸಂಖ್ಯಾತ ಸಮುದಾಯಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಬೆನ್ನಲ್ಲೇ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಸಭೆ ಕರೆದು ಮನವೊಲಿಸಲು ಪ್ರಯತ್ನಿಸಿದರು. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಕರೆದಿದ್ದ ಅಲ್ಪಸಂಖ್ಯಾತ ಮೌಲ್ವಿಗಳ ಸಭೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಸಮುದಾಯದ ಜನರಲ್ಲಿ ಮನವಿ ಮಾಡಿದರು.
ಲಸಿಕೆ ಹಾಕಿಸಿಕೊಳ್ಳದ ಅಲ್ಪಸಂಖ್ಯಾತರ ಮನವೊಲಿಸಲು ಸಭೆ ಕರೆದ ಶಾಸಕ ರೇಣುಕಾಚಾರ್ಯ - ಲಸಿಕೆ ಹಾಕಿಸಿಕೊಳ್ಳುವಂತೆ ರೇಣುಕಾಚಾರ್ಯ ಮನವೊಲಿಕೆ
ಅಲ್ಪಸಂಖ್ಯಾತರಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ಶಾಸಕ ಎಂ ಪಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಸಭೆ ನಡೆಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ಮಸೀದಿಗಳ ಮೌಲ್ವಿ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರ ಸಭೆ ನಡೆಸಿ ಯಾರು ವ್ಯಾಕ್ಸಿನ್ ಹಾಕಿಸಿಕೊಂಡಿಲ್ವೋ ಅಂತಹವರ ಮನವೊಲಿಸಿ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.
ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿದ ಅವರು, ಕೊರೊನಾ ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಯಾರು ಭಯ ಪಡುವ ಅವಶ್ಯಕತೆ ಇಲ್ಲ, ನಿರ್ಭಯದಿಂದ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ವಿರುದ್ಧ ಹೋರಾಡೋಣ ಎಂದು ಮನವರಿಕೆ ಮಾಡಿದರು. ಇದೇ ವೇಳೆ, ಮಸೀದಿಯ ಮೌಲ್ವಿಗಳು, ಸಿಪಿಐ ದೇವರಾಜ್ ಕೂಡ ಸಭೆಯಲ್ಲಿ ಭಾಗಿಯಾಗಿ ಅಲ್ಪಸಂಖ್ಯಾತರು ತಮ್ಮ ಕುಟುಂಬಸ್ಥರಿಗೆ ಲಸಿಕೆ ಹಾಕಿಸುವಂತೆ ಪ್ರೇರೇಪಿಸಿದರು.