ದಾವಣಗೆರೆ:ಶಾಸಕ ಜಮೀರ್ ಅಹ್ಮದ್ ಒಬ್ಬ ಅರೆ ಹುಚ್ಚ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಹತ್ತಾರು ಬಾರಿ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೊದಲು ಅವರನ್ನು ಬಂಧಿಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಮೀರ್ ಅವರಿಗೆ ಹುಚ್ಚು ಹಿಡಿದಿದೆ. ಪಾದರಾಯನಪುರಲ್ಲಿ ನಡೆದ ಗಲಭೆಗೆ ಅವರೇ ಕಾರಣ. ಅವರ ಮೇಲೆ ಗೂಂಡಾ ಕಾಯ್ದೆ, ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಂಥವರನ್ನು ಬೆಂಬಲಿಸಿ ಮಾತನಾಡಿರುವ ಮಾಜಿ ಸಚಿವ ಯು.ಟಿ.ಖಾದರ್ ಓರ್ವ ಮತಾಂಧ ಎಂದು ಆಕ್ರೋಶ ವ್ಯಕ್ತಪಡಿಸಿದರು.