ಹರಿಹರ:ವೀರಶೈವ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸುವ ಹೋರಾಟದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಾಜಕ್ಕೆ ಬೆಂಬಲವಾಗಿ ನಿಲ್ಲುವ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿರುವ ಪಂಚಮಸಾಲಿ ಶ್ರೀಪೀಠಕ್ಕೆ ಭೇಟಿ ನೀಡಿದ್ದ ಸಚಿವರಿಗೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕೇಂದ್ರ ಸರ್ಕಾರವು ಸಮುದಾಯವನ್ನು ಒಬಿಸಿ ಕೆಟಗರಿಯಲ್ಲಿ ಸೇರಿಸಬೇಕು. ಈ ಪ್ರಸ್ತಾಪವನ್ನು ರಾಜ್ಯ ಸರ್ಕಾರವು ಸಚಿವ ಸಂಪುಟದ ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡುವ ಕುರಿತು ಚರ್ಚಿಸಬೇಕು ಎಂದು ಶ್ರೀ ವಚನಾನಂದ ಮಹಾಸ್ವಾಮಿಗಳು ಮನವಿ ಸಲ್ಲಿಸಿದರು.